ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಉಪ್ಪಿನಂಗಡಿ ಸಮೀಪದ ಬಂದಾರಿನ ವಿದ್ಯಾರ್ಥಿನಿ ಚಿತ್ರಾ ಕುಲಾಲ್ ರಾಷ್ಟ್ರಮಟ್ಟದ ಟೆನ್ನಿಸ್ ವಾಲಿಬಾಲ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಕುಮಾರಿ ಚಿತ್ರಾ ಕುಲಾಲ್ ತೆಲಂಗಾಣ ರಾಜ್ಯದ ಮೆಹಬೂಬ್ ನಗರದಲ್ಲಿ ನಡೆಯಲಿರುವ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿನಿಯರ ರಾಷ್ಟ್ರಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯದಲ್ಲಿ ಸಿಂಗಲ್ಸ್ ವಿಭಾಗದಲ್ಲಿ ಆಡಲಿದ್ದಾರೆ. ಚಿತ್ರಾ ಅವರು ಬಂದಾರಿನ ಕೆಂಚಪ್ಪ ಕುಂಬಾರ ಮತ್ತು ಹರಿಣಾಕ್ಷಿ ದಂಪತಿಯ ಪುತ್ರಿ.