ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರಾವಳಿ ಕುಲಾಲ/ಕುಂಬಾರ ಮಹಿಳಾ ಸಂಘ ಇದರ ಬಂಟ್ವಾಳ ತಾಲೂಕಿನ ಅಧ್ಯಕ್ಷರಾಗಿ ಭಾರತಿ ಶೇಷಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅವರು ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಭಾರತಿ ಅವರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ದ. ಕ ಜಿಲ್ಲಾ ಜೊತೆ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಕರ್ನಾಟಕ ರಾಜ್ಯ ಕುಂಬಾರ ಸರಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಉಪಾಧ್ಯಕ್ಷ ಶೇಷಪ್ಪ ಮಾಸ್ತರ್ ಅವರ ಪತ್ನಿಯಾಗಿದ್ದಾರೆ.
ಸಂಘದ ಗೌರವಾಧ್ಯಕ್ಷೆಯಾಗಿ ಯಶೋಧ ಕೃಷ್ಣಪ್ಪ, ಉಪಾಧ್ಯಕ್ಷೆಯಾಗಿ ಚಂದ್ರಿಕಾ ಮಾಧವ, ಕಾರ್ಯದರ್ಶಿಯಾಗಿ ಸುಲೋಚನಾ ಆರ್ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಚಂದ್ರಾವತಿ ಚಂದಪ್ಪ ಮತ್ತು ವನಿತಾ ವಾಮನ, ಸಂಘಟನಾ ಕಾರ್ಯದರ್ಶಿಯಾಗಿ ವಿಜಯಾ, ಕೋಶಾಧಿಕಾರಿಯಾಗಿ ರೋಹಿಣಿ ಸೋಮಪ್ಪ ಆಯ್ಕೆಯಾಗಿದ್ದಾರೆ.

