ಬಂಟ್ವಾಳ : ಬಂಟ್ವಾಳದ ಕುಲಾಲ ಎಜುಕೇಶನ್ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಾಸವಾಗಿರುವ ಕುಲಾಲ ಸಮಾಜ ಬಾಂಧವರ ಮಕ್ಕಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.
ಬಿ.ಇ , ಎಂಬಿಬಿಎಸ್, ಫಾರ್ಮಸಿ ಮತ್ತು ಚಾರ್ಟರ್ಡ್ ಅಕೌಂಟೆ೦ಟ್ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆಯನ್ನು ನವೆಂಬರ್ ೩೦ರ ಒಳಗೆ ಮ್ಯಾನೇಜಿಂಗ್ ಟ್ರಸ್ಟಿ ಕುಲಾಲ ಎಜುಕೇಶನ್ ಟ್ರಸ್ಟ್, ಸಮಾಜ ಸೇವಾ ಸಹಕಾರಿ ಬ್ಯಾಂಕ್ , ಸಮಾಜ ಸಹಕಾರಿ ಭವನ, ಬೈಪಾಸ್ ಜಂಕ್ಷನ್ , ಬಂಟ್ವಾಳ ಇಲ್ಲಿಂದ ಪಡೆದು ಭರ್ತಿ ಮಾಡಿ ಹಿಂತಿರುಗಿಸುವಂತೆ ಪ್ರಕಟಣೆ ತಿಳಿಸಿದೆ.


