
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ಅವರು ವಾಣಿಜ್ಯ ವಿಭಾಗದಲ್ಲಿ 95.33% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಚ್ಚಿನ ಗ್ರಾಮದ ಪದಾರ್ಥಿಮಜಲು ನಾರಾಯಣ ಮೂಲ್ಯ ಮತ್ತು ಪ್ರೇಮಾ ದಂಪತಿಗಳ ಸುಪುತ್ರಿ.