
ಮಂಡ್ಯ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ 10ನೇ ತರಗತಿ ಸಿಬಿಎಸ್ ಸಿ ಪರೀಕ್ಷೆಯಲ್ಲಿ ಮಂಡ್ಯ ಜವಾಹರ್ ನವೋದಯ ವಿದ್ಯಾಲಯ ಪ್ರೌಢಶಾಲೆ ವಿದ್ಯಾರ್ಥಿನಿ ಹರ್ಷಿತಾ ಎಂ ಅವರು 95.80% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಳವಳ್ಳಿ ತಾಲ್ಲೂಕು ಹಿಟ್ಟನಹಳ್ಳಿ ಕೊಪ್ಪಲಿನ ಮಲ್ಲೇಶ್ ಮತ್ತು ನಾಗರತ್ನ ದಂಪತಿಗಳ ಸುಪುತ್ರಿ.