
ಕಾಸರಗೋಡು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಕೇರಳ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬದಿಯಡ್ಕ ಪೆರಡಾಲ ನವಜೀವನ ಕಾಲೇಜಿನ ವಿದ್ಯಾರ್ಥಿನಿ ವರ್ಷಿತಾ ಅವರು ವಿಜ್ಞಾನ ವಿಭಾಗದಲ್ಲಿ 92% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರಡಾಲ ಚೆನ್ನರಕಟ್ಟೆ ಮಹಾಲಿಂಗ ಎನ್ ಮತ್ತು ಪುಷ್ಪಲತಾ ದಂಪತಿಗಳ ಸುಪುತ್ರಿ.