ಪುತ್ತೂರು(ಕುಲಾಲ ವರ್ಲ್ಡ್ ಡಾಟ್ ಕಾಮ್): ಪತ್ರಕರ್ತ ಚಿದಂಬರ ಬೈಕಂಪಾಡಿ ಅವರಿಗೆ ಡಾ. ಶಿವರಾಮ ಕಾರಂತ ಪುರಸ್ಕಾರ ಲಭಿಸಿದೆ. ಪುತ್ತೂರಿನ ಬಾಲವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ.ಶಿವರಾಮ ಕಾರಂತರ ಬಾಲವನ ಪರ್ಲಡ್ಕ, ಸಹಾಯಕ ಆಯುಕ್ತರ ಕಚೇರಿ ಪುತ್ತೂರು ಇವುಗಳ ಸಹಯೋಗದಲ್ಲಿ ನಡೆದ ಡಾ. ಶಿವರಾಮ ಕಾರಂತರ 118ನೇ ಜನ್ಮ ದಿನೋತ್ಸವದಲ್ಲಿ ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಖ್ಯಾತ ಸಾಹಿತಿ ಹಾಗೂ ಚಿಂತಕ ಜಯಂತ ಕಾಯ್ಕಿಣಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಡಾ. ಶಿವರಾಮ ಕಾರಂತರ ಪುತ್ರಿ, ಖ್ಯಾತ ಒಡಿಸ್ಸಿ ನೃತ್ಯ ಕಲಾವಿದೆ ಹಾಗೂ ಬಾಲವನ ಅಭಿವೃದ್ಧಿ ಸಮಿತಿ ಸದಸ್ಯೆ ಕ್ಷಮಾ ರಾವ್, ಪುತ್ತೂರು ಉಪವಿಭಾಗಾಧಿಕಾರಿಯಾದ ಬಾಲವನ ಅಭಿವೃದ್ಧಿ ಸಮಿತಿ ಸದಸ್ಯ ಕಾರ್ಯದರ್ಶಿ ಹೆಚ್.ಕೆ. ಕೃಷ್ಣಮೂರ್ತಿ, ನಗರಸಭಾ ಪೌರಾಯುಕ್ತೆ ರೂಪಾ ಟಿ ಶೆಟ್ಟಿ, ತಾ.ಪಂ. ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ನಗರಸಭಾ ಸದಸ್ಯರಾದ ಶೈಲಾ ಪೈ, ವಿದ್ಯಾಗೌರಿ, ಇಂದಿರಾ ಆಚಾರ್ಯ. ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ. ಪುರಂದರ ಭಟ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ಸುದಾನ ವಸತಿಯುತ ಶಾಲೆಯ ಸಂಚಾಲಕ ರೆ. ವಿಜಯ ಹಾರ್ವಿನ್ ಮತ್ತಿತರರು ಉಪಸ್ಥಿತರಿದ್ದರು.