ವಿಟ್ಲ(ಕುಲಾಲ ವರ್ಲ್ಡ್ ಡಾಟ್ ಕಾಮ್) : ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹಿರೆಸಾವಿಯಲ್ಲಿ ನಡೆದ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯ ಯುವಕ ಬಲಿಯಾದ ಘಟನೆ ರವಿವಾರ ರಾತ್ರಿ ನಡೆದಿದೆ.
ಮಾಣಿ ನಿವಾಸಿ ಉಗ್ಗಪ್ಪ ಮೂಲ್ಯ ಅವರ ಮಗ ಅಭಿಷೇಕ್ (27) ಮೃತಪಟ್ಟ ದುರ್ದೈವಿ. ನಿನ್ನೆ ರಾತ್ರಿ ಮಾಣಿಯಿಂದ ಬಸ್ ಹತ್ತಿದ ಅಭಿಷೇಕ್ ಹಿರೆಸಾವಿಯಲ್ಲಿ ಬಸ್ ಪಲ್ಟಿಯಾಗಿ ಮೃತಪಟ್ಟಿದ್ದಾರೆ. ಅಭಿಷೇಕ್ ಗೆ ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಒಂದರಲ್ಲಿ ಕೆಲಸ ಸಿಕ್ಕಿದ್ದು ಅವರು ಇಂದು ಕೆಲಸಕ್ಕೆ ಹಾಜರಾಗಲಿದ್ದರು. ಆದರೆ ಕೆಲಸದ ಉತ್ಸಾಹದಲ್ಲಿ ಮನೆ ಬಿಟ್ಟಿದ್ದ ಅಭಿಷೇಕ್ ಮರಳಿ ಬಾರದ ಲೋಕಕ್ಕೆ ತೆರಳಿದ್ದಾರೆ . ಇತ್ತೀಚೆಗೆ ಅಭಿಷೇಕ್ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ನಿನ್ನೆ ಅವರ ಹತ್ತಿರದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಅವರು ಊರಿಗೆ ಬಂದಿದ್ದರು. ಮದುವೆ ಮುಗಿಸಿ ವಾಪಾಸು ಊರಿನಿಂದ ಬಸ್ ಮೂಲಕ ಬೆಂಗಳೂರಿಗೆ ತಮ್ಮನ ಜೊತೆಯಲ್ಲಿ ಪ್ರಯಾಣ ಬೆಳೆಸಿದ್ದರು. ತಮ್ಮನಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.