ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ದಕ್ಷಿಣ ಕನ್ನಡ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ-2020ಗೆ ಕುಲಾಲ ಸಮುದಾಯದ ಇಬ್ಬರು ಸರಕಾರಿ ನೌಕರರು ಆಯ್ಕೆಯಾಗಿದ್ದಾರೆ.
ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಡಾ. ಆನಂದ ಎಸ್ ಬಂಜನ್ ಹಾಗೂ ಕಲ್ಲಮುಂಡ್ಕೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಉಗ್ಗಪ್ಪ ಮೂಲ್ಯ ಸೇವಾ ಪ್ರಶಸ್ತಿಗೆ ಆಯ್ಕೆಯಾದವರು. ಇವರು ಸೇರಿದಂತೆ ಪ್ರಶಸ್ತಿಗೆ ಜಿಲ್ಲಾ ಆರೋಗ್ಯಾಧಿಕಾರಿ ಸಹಿತ ಒಟ್ಟು 10 ಮಂದಿ ಸರ್ಕಾರಿ ನೌಕರರನ್ನು ಆಯ್ಕೆ ಮಾಡಲಾಗಿದೆ. ಜನವರಿ 26 ರಂದು ನೆಹರೂ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರದಾನ ಮಾಡಲಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ ತಿಳಿಸಿದ್ದಾರೆ.