ಮೂಡಬಿದ್ರೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್ ನ್ಯೂಸ್) : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 2019 ನೇ ಸಾಲಿನ ಪದವಿ ಪರೀಕ್ಷೆಯಲ್ಲಿ ಆಳ್ವಾಸ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಮೇಘಾ ಪ್ರಥ್ವಿರಾಜ್ ಅವರು ತೃತೀಯ ರ್ಯಾಂಕ್ ಪಡೆದಿದ್ದಾರೆ. ಪರೀಕ್ಷೆಯು 2019ರ ಫೆಬ್ರವರಿ ತಿಂಗಳಲ್ಲಿ ನಡೆದಿದ್ದು, ಆಳ್ವಾಸ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ಒಟ್ಟು ಒಂಬತ್ತು ರ್ಯಾಂಕ್ಗಳನ್ನು ಪಡೆದುಕೊಂಡಿದೆ. ರ್ಯಾಂಕ್ ವಿಜೇತರ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ್ ಆಳ್ವ ಹಾಗೂ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ. ಮೇಘಾ ಅವರು ಗುರುಪುರ ನಿವಾಸಿ, ಕೆಪಿಸಿಸಿ ಸದಸ್ಯ ಆರ್.ಕೆ ಪ್ರಥ್ವಿರಾಜ್ ಅವರ ಸುಪುತ್ರಿ.
ಆರೋಗ್ಯ ವಿಜ್ಞಾನ ಪರೀಕ್ಷೆ : ಮೇಘಾ ಪ್ರಥ್ವಿರಾಜ್ ಗೆ ತೃತೀಯ ರ್ಯಾಂಕ್
Students corner
1 Min Read


