ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕಲ್ಲಡ್ಕದ ಗೋಳ್ತಮಜಲು ಗ್ರಾಮದ ಯುವಕನೊಬ್ಬ ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗೋಳ್ತಮಜಲು ಚಂದ್ರಹಾಸ ಮೂಲ್ಯ ಅವರ ಮಗ ನಿಶಾಂತ್ ಆತ್ಮಹತ್ಯೆಗೆ ಶರಣಾದ ಯುವಕ.
ಈತ ನೀರಿಗೆ ಧುಮುಕಿದನ್ನು ಕಂಡ ಸ್ಥಳೀಯ ಮುಸ್ಲಿಂ ಯುವಕರ ತಂಡ ರಕ್ಷಿಸಲು ತುಂಬಿ ನಿಂತಿರುವ ನೇತ್ರಾವತಿ ಸೇತುವೆ ಮೇಲೆ ಧುಮುಕಿ ರಕ್ಷಣೆಗೆ ಮುಂದಾದರು. ಈತನನ್ನು ಮೇಲಕ್ಕೆತ್ತುವಲ್ಲಿ ಸಫಲವಾದರೂ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ನೇತ್ರಾವತಿ ನದಿಗೆ ಹಾರಿ ಯುವಕನ ರಕ್ಷಣೆಗೆ ಮುಂದಾದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವಕರ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.