ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕುಳಾಯಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷರಾಗಿ ಮಯೂರ್ ಉಳ್ಳಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಮ ಬಂಗೇರ ಆಯ್ಕೆಯಾದರು.
ಜೂನ್ ಹತ್ತರಂದು ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಯೂರ್ ಉಳ್ಳಾಲ್ ಅವರು ರಾಜ್ಯ ಕೈಗಾರಿಕಾ ಮಂಡಳಿ ಉಪಾಧ್ಯಕ್ಷರಾಗಿ ಹಾಗೂ ಮರಳು ಗುತ್ತಿಗೆದಾರರ ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.