ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ವಿಭಾಗ ವತಿಯಿಂದ ವೈದ್ಯರ ದಿನಾಚರಣೆ ಪ್ರಯುಕ್ತ ಕೊಡಮಾಡುವ ಪ್ರತಿಷ್ಠಿತ ಡಾ.ಬಿ.ಸಿ.ರಾಯ್ ಪ್ರಶಸ್ತಿಯನ್ನು ಡಾ.ಅಣ್ಣಯ್ಯ ಕುಲಾಲ್ ಸಹಿತ ರಾಜ್ಯದ ಇತರ 12 ಮಂದಿ ವೈದ್ಯರಿಗೆ ಪ್ರದಾನ ಮಾಡಲಾಯಿತು. ಬೆಂಗಳೂರಿನ ಐಎಂಎ ಪ್ರಧಾನ ಕಚೇರಿಯ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ವೈದ್ಯಕೀಯ ಸಚಿವ ಡಾ. ಸುಧಾಕರ್ ಸಾಧಕರನ್ನ ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಿದರು.
ಐಎಂಎ ರಾಜ್ಯ ಅಧ್ಯಕ್ಷ ಡಾ. ಮಧುಸೂಧನ, ಕಾರ್ಯದರ್ಶಿ ಡಾ. ಶ್ರೀನಿವಾಸ್, ನಿಯೋಜಿತ ಅಧ್ಯಕ್ಷ ಡಾ. ವೆಂಕಟಾಚಲಪತಿ ಉಪಸ್ಥಿತರಿದ್ದರು. ಹಿರಿಯ ನಾಯಕ ಡಾ. ಯೋಗಾನಂದ ರೆಡ್ಡಿ, ಡಾ. ಪವನ್ ಪಾಟೀಲ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಶಸ್ತಿ ಪುರಸ್ಕೃತ ಡಾ.ಅಣ್ಣಯ್ಯ ಕುಲಾಲ್ ಅವರು ಶ್ರೀನಿವಾಸ ವೈದ್ಯವಿಶ್ವವಿದ್ಯಾಲಯದ ಮುಖ್ಯ ವೈದ್ಯಾಧಿಕಾರಿಯಾಗಿದ್ದು, ಕಳೆದ 20 ವರ್ಷಗಳಿಂದ ಪ್ರಾಧ್ಯಾಪಕರಾಗಿ, ಕುಟುಂಬ ವೈದ್ಯರಾಗಿ ಕುಲಾಲ್ ಹೆಲ್ತ್ ಸೆಂಟರ್ ಮೂಲಕ ಸೇವೆ ಸಲ್ಲಿಸುತ್ತಿದ್ದಾರೆ. ಹಳ್ಳಿಗಳಲ್ಲಿ ವೈದ್ಯಕೀಯ ಸೇವೆ, ವೈದ್ಯಕೀಯ ಶಿಕ್ಷಣ, ವೈದ್ಯ ಸಂಘಟನೆ, ವೈದ್ಯ ಸಾಹಿತ್ಯ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಡಾ.ಕುಲಾಲ್ ಅವರು, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ, ಸರ್ವಜ್ಞ ಸೆಕೆಂಡ್ ಒಪೀನಿಯನ್ ಸೆಂಟರ್, ಕನ್ನಡಕಟ್ಟೆ ಮೂಲಕ ಆರೋಗ್ಯ ಜಾಗೃತಿ ಮೂಡಿಸುತ್ತಿದ್ದಾರೆ.