
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಟೀಲು ಎಸ್ ಡಿಪಿಟಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಾಕ್ಷಿ ಸುರೇಶ್ ಅವರು ವಾಣಿಜ್ಯ ವಿಭಾಗದಲ್ಲಿ 95.83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಏಳಿಂಜೆಯ ಸುರೇಶ್ ಬಂಜನ್ ಮತ್ತು ಜಯಂತಿ ಎಸ್ ಬಂಜನ್ ದಂಪತಿಯ ಸುಪುತ್ರಿ.