ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದ ತಂಡಕ್ಕೆ ದಕ್ಷಿಣ ಕನ್ನಡ ಪ್ರತಿನಿಧಿಯಾಗಿ ಮಂಗಳೂರು ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮಧುವಂತ್ ಪಕ್ಕಲಡ್ಕ ಆಯ್ಕೆಯಾಗಿದ್ದಾರೆ. ಇವರು ಎಸ್ ಎಫ್ ಐ ಕಾರ್ಯಕರ್ತರಾಗಿದ್ದು, ಬಜಾಲ್ ಘಟಕದ ಕಾರ್ಯದರ್ಶಿಯಾಗಿದ್ದಾರೆ. ಇತ್ತೀಚೆಗೆ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಗರದ ಶಾರದ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಮಂಗಳೂರು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದಿತ್ತು.
ರಾಜ್ಯಮಟ್ಟದ ವಾಲಿಬಾಲ್ ತಂಡಕ್ಕೆ ಮಧುವಂತ್ ಪಕ್ಕಲಡ್ಕ
sports
1 Min Read