
ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಸ್ತಾನ ಸೇಂಟ್ ಆಂಟೋನಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ವೈಭವ್ ವಿ ಹಾಂಡ 96.32% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಾಸ್ತಾನ ವಾಸು ಹಾಂಡ ಮತ್ತು ಬೇಬಿ ದಂಪತಿಯ ಸುಪುತ್ರ.