
ಕಾಸರಗೋಡು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ಯಾನ ಸರಸ್ವತಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ದೀಶಾ 88% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಡ್ಲಮೊಗರು ಪಜ್ವ ಮನೆಯ ಗೋಪಾಲಕೃಷ್ಣ. ಪಿ ಮತ್ತು ಜಯಲಕ್ಷ್ಮೀ ದಂಪತಿಯ ಸುಪುತ್ರಿ.