
ಬಾಗಲಕೋಟೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬ್ಯಾಡಗಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸುನೀತಾ ಕುಂಬಾರ 98.72% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬ್ಯಾಡಗಿಯ ಶಿವಲಿಂಗಪ್ಪ ಕುಂಬಾರ ಹಾಗೂ ಸಾವಿತ್ರಿ ದಂಪತಿಯ ಸುಪುತ್ರಿ.