ಹೆಬ್ರಿ : ಭಾರತ ಸರಕಾರದ ಇಂಧನ ಸಚಿವಾಲಯ ಆಯೋಜಿಸಿದ್ದ ನವೆಂಬರ್ ೬ರಂದು ಬೆಂಗಳೂರಿನಲ್ಲಿ ನಡೆದ ಇಂಧನ ಉಳಿತಾಯದ ಕುರಿತಾದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹೆಬ್ರಿಯ ಎಸ್ ಆರ್ ಪಬ್ಲಿಕ್ ಶಾಲೆಯ ೫ನೇ ತರಗತಿಯ ವಿದ್ಯಾರ್ಥಿ, ಪೆರ್ಡೂರು ಕುಡ್ತ್ರುಬೈಲು ಜಯ ಮೂಲ್ಯ ಮತ್ತು ಸುಮಿತ್ರ ಮೂಲ್ಯ ದಂಪತಿಯ ಸುಪುತ್ರ ಸೃಜನ್ ಮೂಲ್ಯ ವಿಜೇತನಾಗಿದ್ದಾನೆ.
ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಡಿ. ೧೪ರಂದು ನಡೆಯಲಿರುವ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಎಸ್ ಆರ್ ಪಬ್ಲಿಕ್ ಶಾಲೆಯ ಚಿತ್ರಕಲಾ ಶಿಕ್ಷಕ ಸುಕೇಶ್ ಅವರ ಮಾರ್ಗದರ್ಶನದಲ್ಲಿ ಈಗಾಗಲೇ ಈತ, ರಾಜ್ಯಮಟ್ಟದ ಹಾಗೂ ಇತರ ಸಂಘ ಸಂಸ್ಥೆಗಳು ನಡೆಸಿದ ಹಲವಾರು ಸ್ಪರ್ಧೆಗಳಲ್ಲಿ ಪ್ರಶಸ್ತಿಯನ್ನು ಪಡೆದಿದ್ದಾನೆ ಎಂದು ಎಸ್ ಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.


