ಮಂಗಳೂರು(ಡಿ.೧೧, ಕುಲಾಲ್ ವರ್ಲ್ಡ್ ಡಾಟ್ ಕಾಮ್) : ದ.ಕ.ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ನಿಕಟಪೂರ್ವ ಅಧ್ಯಕ್ಷ ಸುಜೀರ್ ಶ್ರೀಧರ ಕುಡುಪು ಅವರು ಅಸೌಖ್ಯದಿಂದ ವಿಧಿವಶರಾಗಿದ್ದಾರೆ.
ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಶ್ರೀಧರ ಕುಡುಪು ಅವರನ್ನು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ನಿಧನರಾದರು. ಕರಾವಳಿ ಕುಲಾಲ-ಕುಂಬಾರ ಯುವವೇದಿಕೆಯ ದ.ಕ ಜಿಲ್ಲಾ ಅಧ್ಯಕ್ಷರಾಗಿ, ನೀರುಮಾರ್ಗ ಕುಲಾಲ ಸಂಘದ ಅಧ್ಯಕ್ಷರಾಗಿ, ಕುಲಶೇಖರ ವೀರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ದುಡಿದಿರುವ ಸುಜೀರ್ ಅವರು, ಕರ್ನಾಟಕ ರಾಜ್ಯ ಕುಂಬಾರರ ಮಹಾಸಂಘದ ಕರಾವಳಿ ವಿಭಾಗದ ಕುಲಾಲ-ಕುಂಬಾರ ಒಕ್ಕೂಟದ ದ.ಕ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕರಾವಳಿಯಲ್ಲಿ ಸಮಾಜ ಸೇವೆ ಹಾಗೂ ಧಾರ್ಮಿಕ ಸಂಘಟನೆಗಳಲ್ಲಿ ತನ್ನನ್ನ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಅವರು ವೃತ್ತಿಯಲ್ಲಿ ಕಾಂಟ್ರಾಕ್ಟರ್ ಆಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಬಿಟ್ಟು ಅಗಲಿದ್ದಾರೆ.
ಮೃತರ ಅಂತಿಮ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ಶಕ್ತಿ ನಗರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.