ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್) : ದಕ್ಷಿಣ ಕನ್ನಡ ಉಡುಪಿ, ಕೊಡಗು, ಮೈಸೂರು, ಜಿಲ್ಲೆಗಳಿಗೆ ಕಾರ್ಯವ್ಯಾಪ್ತಿಯನ್ನು ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿಯಮಿತ ಪುತ್ತೊರು ದ.ಕ ಇವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ 2020-21 ನೇ ಸಾಲಿನ ವಿಶೇಷ ಸಾಧನಾ ಪ್ರಶಸ್ತಿ ಹಾಗೂ ಸುರತ್ಕಲ್ ಸ್ವರ್ಣಕುಂಭ ವಿವಿದ್ದೋದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿರುತ್ತಾರೆ.
ಸಹಕಾರ ಸಂಘವು ಸರ್ವತೋಮುಖ ಅಭಿವೄದ್ದಿಯನ್ನು ಹೊಂದಿದ್ದು, ಅದರಲ್ಲೂ ಗ್ರಾಮೀಣ ಗುಡಿಕೈಗಾರಿಕೆಯಾದ ಕುಂಬಾರಿಕೆಯನ್ನು ಅಭಿವೃದ್ಧಿಗೊಳಿಸಿರುವುದನ್ನು ಪರಿಗಣಿಸಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ಮತ್ತು ಸ್ವರ್ಣಕುಂಭ ವಿವಿದ್ದೋದೇಶ ಸಹಕಾರಿ ಸಂಘಕ್ಕೆ 2ನೇ ಬಾರಿಗೆ ಪ್ರಶಸ್ತಿ ಲಭಿಸಿದೆ. ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಎಂ ಪೆರುವಾಯಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಜನಾರ್ದನ ಮೂಲ್ಯ ಪ್ರಶಸ್ತಿ ಸ್ವೀಕರಿಸಿದರೆ, ಸ್ವರ್ಣಕುಂಭ ವಿವಿದ್ದೋದೇಶ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಲಾಲ್ ಕುಳಾಯಿ ಸಿ. ಇ. ಓ. ಸಂಜೀವ ಮೂಲ್ಯ ಪ್ರಶಸ್ತಿ ಸ್ವೀಕರಿಸಿದರು .
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಶಶಿಕುಮಾರ್ ಬಾಲ್ಯೋಟ್ಟು, ದೇವಿಪ್ರಸಾದ್ ಶೆಟ್ಟಿ, ನಿರಂಜನ್ ಬಿ, ಎಸ್ ಬಿ ಜಯರಾಮ ರೈ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.