
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್) : ಪೊಲೀಸ್ ಇಲಾಖೆಯ ದ.ಕ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟದಲ್ಲಿ ಬಂಟ್ವಾಳ ನಗರ ಪೋಲೀಸ್ ಠಾಣೆಯ ಮಹಿಳಾ ಪೋಲೀಸ್ ಸಿಬ್ಬಂದಿ ವನಿತಾ ಕುಲಾಲ್ ಅವರು ವೈಯಕ್ತಿಕ ಆಟೋಟ ಸ್ಪರ್ಧೆಯಲ್ಲಿ ಚಾಂಪಿಯನ್ ಅಗಿ ಮಿಂಚಿದ್ದಾರೆ. 100, 200 , 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಲಾಂಗ್ ಜಂಪ್ ನಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. ಇವರು ಈ ಹಿಂದೆ ನಡೆದ ರಾಜ್ಯಮಟ್ಟದ ಪೋಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮದ ರಾಮಮೂಲೆಯ ವೆಂಕಟೇಶ್ ಕುಲಾಲ್ ಹಾಗೂ ರಾಜೀವಿ ದಂಪತಿಯ ಪುತ್ರಿಯಾಗಿರುವ ವನಿತ ಪ್ರಸ್ತುತ ಬಂಟ್ವಾಳ ನಗರ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾರೆ.
