ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್) : ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರದೀಪ್ ಅವರು `ಆನ್ ಅನಾಲಿಸಿಸ್ ಆಫ್ ಕ್ಯಾಶ್ಯು ಕಲ್ಟಿವೇಷನ್ ಆಂಡ್ ಮಾರ್ಕೆಟಿಂಗ್ ವಿತ್ ಸ್ಪೆಷಲ್ ರೆಫರೆನ್ಸ್ ಟು ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್ ‘ ಎಂಬ ವಿಷಯದ ಮೇಲೆ ನಡೆಸಿದ ಸಂಶೋಧನೆಯ ಮಹಾ ಪ್ರಬಂಧವನ್ನು ಪುರಸ್ಕರಿಸಿ ಕುವೆಂಪು ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ. ಇವರು ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ಪದವಿ ಹಾಗೂ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ್ದು, ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಎಂಟು ವರ್ಷ ಸೇವೆ ಸಲ್ಲಿಸಿದ್ದರು. ಪ್ರದೀಪ್ ಅವರು ಮಡಿಕೇರಿ ಹೆರವನಾಡು ಗ್ರಾಮದ ಪನ್ಯ ನಿವಾಸಿಗಳಾದ ಕೆ ಯು ಸೋಮಯ್ಯ ಮತ್ತು ಕೆ ಎಸ್ ಲಲಿತಾ ದಂಪತಿಯ ಪುತ್ರ.
ಪ್ರೆಸಿಡೆನ್ಸಿ ಕಾಲೇಜಿನ ಪ್ರಾಧ್ಯಾಪಕ ಪ್ರದೀಪ್ ಅವರಿಗೆ ಡಾಕ್ಟರೇಟ್
Kulal news
1 Min Read