ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್) : ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ೨೦೨೧-೨೨ನೇ ಸಾಲಿನ ಎಂ.ಕಾಂ.ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನ ವಿದ್ಯಾರ್ಥಿನಿ ನೇಹಾ ಆರ್. ಮೊಡಂಕಾಪು ಅವರು 10ನೇ ರ್ಯಾಂಕ್ ಗಳಿಸಿದ್ದಾರೆ. ಇವರು ಎಎಂಆರ್ ಸಂಸ್ಥೆಯ ವ್ಯವಸ್ಥಾಪಕ ರಾಜೇಂದ್ರಕುಮಾರ್ ಎಂ. ಹಾಗೂ ಶಿಕ್ಷಕಿ ಇಂದಿರಾ ಕೆ.ಅವರ ಪುತ್ರಿ.