
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್) : ಪತ್ರಕರ್ತ, ಮಂಗಳೂರು ವಿ.ವಿ ಯಕ್ಷಗಾನ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕ ಸತೀಶ್ ಕೊಣಾಜೆ ಅವರು ಸಮಾಜಶಾಸ್ತ್ರ ವಿಭಾಗದಲ್ಲಿ ‘ ಯಕ್ಷಗಾನ ಕಲಾವಿದರು: ಒಂದು ಸಮಾಜಶಾಸ್ತ್ರೀಯ ಅಧ್ಯಯನ’ ಎಂಬ ವಿಷಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಕ್ಕೆ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್ ಡಿ ಪದವಿ ನೀಡಿದೆ. ಇತ್ತೀಚೆಗೆ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಪದವಿಯನ್ನು ಪಡೆದುಕೊಂಡರು. ಇವರು ಮಂಗಳೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಹಾಗೂ ಶಿವಮೊಗ್ಗ ವಿವಿಯ ವಿಶ್ರಾಂತ ಕುಲಪತಿಗಳಾದ ಪ್ರೊ.ಜೋಗನ್ ಶಂಕರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆಯನ್ನು ನಡೆಸಿದ್ದಾರೆ. ಸತೀಶ್ ಅವರು ಕೊಣಾಜೆ ನಡುಪದವಿನ ದಿ.ಅಣ್ಣಪ್ಪ ಮೂಲ್ಯ ಹಾಗೂ ಸೇಸಮ್ಮ ದಂಪತಿಯ ಪುತ್ರರಾಗಿದ್ದಾರೆ.
