
ಮೂಡಬಿದ್ರೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ದೇಶದಾದ್ಯಂತ ನಗರ ಸ್ವಚ್ಛತೆ ಪರಿಕಲ್ಪನೆಯಲ್ಲಿ ಕೇಂದ್ರ ಸರ್ಕಾರ ಸ್ವಚ್ಛ ಸರ್ವೇಕ್ಷಣ 2022 ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಇದರಲ್ಲಿ ಮೂಡಬಿದ್ರೆ ಪುರಸಭೆ ವತಿಯಿಂದ ನಡೆಸಿದ ಸ್ವಚ್ಛ ಸರ್ವೇಕ್ಷಣೆ ಸ್ಪರ್ಧೆಯಬೀದಿ ನಾಟಕ’ ವಿಭಾಗದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಾಪಕ ಮೋಹನ್ ಕುಲಾಲ್ ಅವರು ಉತ್ತಮ ನಿರ್ದೇಶಕ ಪ್ರಶಸ್ತಿ' ಪಡೆದಿದ್ದಾರೆ. ಇವರ ನಿರ್ದೇಶನದಲ್ಲಿನನ್ನ ಕಸ ನನ್ನ ಜವಾಬ್ದಾರಿ’ ಎಂಬ ಬೀದಿ ನಾಟಕವನ್ನು ಪ್ರದರ್ಶಿಸಲಾಗಿತ್ತು. ಮೋಹನ್ ಅವರು ಹೊಸ್ಮಾರು ನೆಲ್ಲಿಗುಡ್ಡೆ ಮನೆಯ ರಾಮಕೃಷ್ಣ ಮೂಲ್ಯ ಮತ್ತು ರುಕ್ಮಿಣಿ ದಂಪತಿಯ ಸುಪುತ್ರರಾಗಿದ್ದಾರೆ.

