ಪುತ್ತೂರು: ಮೈಸೂರಿನಲ್ಲಿ ಜರಗಿದ 62ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಪ್ರಶಸ್ತಿ ಲಭಿಸಿದೆ.
ರಾಜ್ಯ ಸರಕಾರದ ಸಹಕಾರ ಹಾಗೂ ಸಕ್ಕರೆ ಸಚಿವ ಮಹದೇವ ಪ್ರಸಾದ್ ಹಾಗೂ ಲೋಕೋಪಯೋಗಿ ಸಚಿವ ಡಾ. ಸಿ.ಮಹದೇವಪ್ಪರವರ ಸಮಕ್ಷಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಶೇಖರ ಗೌಡ ಮಾಲಿ ಪಾಟೀಲರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕಳೆದ ವರ್ಷವೂ ಈ ಸಂಘಕ್ಕೆ ಪ್ರಶಸ್ತಿ ಲಭಿಸಿತ್ತು.
ಸಹಕಾರ ಸಂಘವು ಕುಂಬಾರ ಸಮಾಜದ ಹಾಗೂ ಗುಡಿ ಕೈಗಾರಿಕೆಯ ಅಭಿವೃದ್ಧಿಗಾಗಿ ಜಿಲ್ಲಾ ಮಟ್ಟದಲ್ಲಿ ಸಹಕಾರಿ ಕ್ಷೇತ್ರದಡಿಯಲ್ಲಿ ಕಾರ್ಯಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ ಎಂದು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಎಂ. ಪೆರುವಾಯಿ ತಿಳಿಸಿದ್ದಾರೆ.
(ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಕುರಿತ ಲೇಖನ pottery news ವಿಭಾಗದಲ್ಲಿ ಇದೆ ಓದಿರಿ)