ಹಾವೇರಿ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆ ಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಇಚ್ಛೆಯುಳ್ಳ ಅಭ್ಯರ್ಥಿಗಳು ಎಲ್ಲ ಅಂಕಣಗಳನ್ನು ಭರ್ತಿ ಮಾಡಿ ಅರ್ಜಿಯ ಜೊತೆಗೆ ದಾಖಲಾತಿಗಳ ಸ್ವಯಂ ದೃಢೀಕೃತ ನಕಲುಗಳನ್ನು ಲಗತ್ತಿಸಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಹಾವೇರಿ, ಈ ವಿಳಾಸಕ್ಕೆ ನಿಗದಿತ ಅವಧಿಯೊಳಗಾಗಿ ಸಲ್ಲಿಸತಕ್ಕದ್ದು.
ಒಟ್ಟು ಹುದ್ದೆ : 11
ವೇತನ ಶ್ರೇಣಿ : ರೂ 14550-350-15600-400-17200-450-19000-500-21000-600-24600-700- 26700/-
ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆಃ- 1. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
2. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
3. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಕನ್ನಡ ಮತ್ತು ಆಂಗ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ನಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಹಿರಿಯ ದರ್ಜೆ ಶೀರ್ಘಲಿಪಿ ಮತ್ತು ಬೆರಳಚ್ಚು ಪರೀಕ್ಷೆ ತೇರ್ಗಡೆ ಹೊಂದಿರಬೇಕು.
ವಯೋಮಿತಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಬsರ್ಥಿಯು ಈ ಕೆಳಕಂಡ ವಯೋಮಿತಿಯನ್ನು ಹೊಂದಿರತಕ್ಕದ್ದು.
1. ಕನಿಷ್ಟ ವಯೋಮಿತಿ 18 ವರ್ಷ
2. ಗರಿಷ ವಯೋಮಿತಿ – ಸಾಮಾನ್ಯ ವರ್ಗ – 35 ವರ್ಷ- ಪ್ರವರ್ಗ 2ಎ, 2ಬಿ, 3ಎ, 3ಬಿ – 38 ವರ್ಷ – ಪರಿಶಿಷ್ಟ ಜಾತಿ, ಪರಿಶಿಷ್ಟ, ಪಂಗಡ ಪ್ರವರ್ಗ1- 40 ವರ್ಷ. ಸರ್ಕಾರಿ ಸೇವೆಯಲ್ಲಿರುವವರಿಗೆ, ವಿದವೆಯರಿಗೆ, ಮಾಜಿ ಸೈನಿಕರಿಗೆ ಮತ್ತು ಅಂಗವಿಕಲರಿಗೆ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಅರ್ಜಿ ತಲುಪಲು ಕೊನೆ ದಿನಾಂಕ 15-12-2015
ಹೆಚ್ಚಿನ ಮಾಹಿತಿಗಾಗಿ http://ecourts.gov.in/haveri ವೆಬ್ ಸೈಟ್ ಸಂಪರ್ಕಿಸಿರಿ.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾವೇರಿ : ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನ
Jobs
1 Min Read