ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ವಿದ್ಯಾರ್ಥಿನಿ ಅನ್ನಪೂರ್ಣ 90.72% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಗ್ಗ ಉಗ್ಗಬೆಟ್ಟು, ಜಯಂತ ಬಂಗೇರ ಮತ್ತು ಯಶೋಧ ದಂಪತಿಯ ಸುಪುತ್ರಿ.