ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ತಾವರ ಸರೋಜಿನಿ ಮಧುಸೂಧನ ಕುಶೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿತಾ 96% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅತ್ತಾವರ ರಂಜಿತ್ ಕುಮಾರ್ ಹಾಗೂ ಪುಷ್ಪಾ (ರಮ್ಯಾ) ದಂಪತಿಯ ಸುಪುತ್ರಿ.