ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಭೂಮಿಕಾ ಕುಲಾಲ್ 77.6% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೋಕೂರು ರಾಮನಗರ ಉಮೇಶ್ ಕುಲಾಲ್ ಹಾಗೂ ಸುನೀತಾ ದಂಪತಿಯ ಸುಪುತ್ರಿ.