ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಂಕರಪುರ ಸೈಂಟ್ ಜಾನ್ಸ್ ಪ್ರೌಢಶಾಲೆ ವಿದ್ಯಾರ್ಥಿ ಅಂಕಿತ್ 87.04% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಶಂಕರಪುರ ಸಾಲ್ಮರ ನಿವಾಸಿ ಆನಂದ ಮೂಲ್ಯ ಹಾಗೂ ಸರೋಜಾ ದಂಪತಿಗಳ ಸುಪುತ್ರ.