ಬೆಳ್ತಂಗಡಿ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ನೂತನ ಸಮುದಾಯ ಭವನ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆಯು ಮೇ ೨೨ರಂದು ಗುರುವಾಯನಕೆರೆ ಶಾರದಾ ಮಂಟಪದಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕು ಸಂಘದ ಅಧ್ಯಕ್ಷ ಹರೀಶ್ ಕಾರಿಂಜ ಅವರು ಮಾತನಾಡಿ, ನಮ್ಮ ಸಮುದಾಯ ಭವನಕ್ಕೆ ಶಾಸಕ ಹರೀಶ್ ಪೂಂಜ ಅವರು ರೂ. 1.50 ಕೋಟಿ ಅನುದಾನ ಒದಗಿಸಿದ್ದಾರೆ. ಈಗಿರುವ ಕುಲಾಲ ಭವನದ ಸ್ಥಳದಲ್ಲಿ ನೂತನ ಸಮುದಾಯ ಭವನ ನಿರ್ಮಿಸಲು ಜಾಗದ ಕೊರತೆ ಇದೆ.
ಇದಕ್ಕಾಗಿ ಹೊಸದಾಗಿ 37 ಸೆಂಟ್ಸ್ ಜಾಗವನ್ನು ಖರೀದಿಸಿ ಸಮುದಾಯ ಭವನ ನಿರ್ಮಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಸಮುದಾಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷ ಸೋಮಯ್ಯ ಮೂಲ್ಯ ಹನೈನಡೆ ಅವರು ಮಾತನಾಡಿ, ರೂ. 1.00 ಕೋಟಿಯಷ್ಟು ಮೊತ್ತ ನಿವೇಶನ ಖರೀದಿಗೆ ಬೇಕಾಗಿದ್ದು, ಎಲ್ಲರು ಸಹಕರಿಸುವಂತೆ ವಿನಂತಿಸಿದರು. ಸಂಘಟನಾ ಕಾರ್ಯದರ್ಶಿ ಸೋಮನಾಥ ಕೆ.ವಿ., ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಹಾಗೂ ಸಭಾಭವನ ನಿರ್ಮಾಣ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.