ಬೆಳಗಾವಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಇಲ್ಲಿನ ಮೂಲ್ಯರ ಯಾನೆ ಕುಲಾಲ ಸಂಘದ ವಾರ್ಷಿಕ ಮಹಾಸಭೆಯು ಪೊಲೀಸ್ ಕ್ವಾರ್ಟಸ್ ನ ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಭಾಭವನದಲ್ಲಿ ಸಂಘದ ಅಧ್ಯಕ್ಷ ನಾರಾಯಣ ಮೂಲ್ಯ ಅವರ ಮುಂದಾಳುತ್ವದಲ್ಲಿ ಫೆ. 3ರಂದು ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಬೆಳಗಾವಿ ಜಿಲ್ಲಾ ನಿರ್ದೇಶಕ ಸೀನಪ್ಪ ಮೂಲ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉತ್ತರ ವಿಧಾನಸಭಾ ಕ್ಷೇತ್ರ ಶಾಸಕರಾದ ಅನಿಲ ಬೆನಕೆ, ಬೆಳಗಾವಿ ಜಿಲ್ಲೆ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ರಾಜಶೇಖರ ತಳವಾರ ಮತ್ತು ವಕೀಲ ಗಿರಿರಾಜ ಎನ್ ಪಾಟೀಲ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ 2018ರ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಮತ್ತು ಪದವಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಯಿತು. ಅಲ್ಲದೆ ವಿದ್ಯಾರ್ಥಿಗಳಿಗಾಗಿ ಚಿತ್ರಕಲೆ ಸ್ಪರ್ಧೆ ಮತ್ತು ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.