ದೋಹಾ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಎಸ್ಎಸ್ಎಲ್ಸಿ ಮತ್ತು ಪಿಯುಸಿ ಅಭ್ಯಸಿಸುತ್ತಿರುವ ಕುಲಾಲ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಟ್ಟು 1.50 ಲಕ್ಷ ರೂ.ಗಳ ವಿದ್ಯಾರ್ಥಿವೇತನವನ್ನು ಕುಲಾಲ್ಸ್ ದೋಹಾ ಪ್ರಸಕ್ತ ವರ್ಷದಲ್ಲಿ ವಿತರಿಸಿದೆ.
ಎಸ್ಎಸ್ಎಲ್ಸಿಯಲ್ಲಿ ಸಾಧನೆ ಮಾಡಿದ 28 ವಿದ್ಯಾರ್ಥಿಗಳಿಗೆ ತಲಾ 3 ಸಾವಿರದಂತೆ 84 ಸಾವಿರ ರೂ. ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ 16 ವಿದ್ಯಾರ್ಥಿಗಳಿಗೆ ತಲಾ 4 ಸಾವಿರದಂತೆ 64 ಸಾವಿರ ರೂಪಾಯಿಯಂತೆ ಒಟ್ಟು 44 ವಿದ್ಯಾರ್ಥಿಗಳಿಗೆ 1,48,000 ರೂ. ಮೊತ್ತದ ವಿದ್ಯಾರ್ಥಿವೇತನ ವಿತರಣೆ ಮಾಡಲಾಗಿದೆ. ದೇಶದ ಮೂಲೆ ಮೂಲೆಗಳಿಂದ ಒಟ್ಟು 145 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ಇದರಲ್ಲಿ ಕೆಲವು ಅಪೂರ್ಣ ಮಾಹಿತಿಯಿಂದ ತಿರಸ್ಕೃತಗೊಂಡಿದ್ದು, ಉಳಿದಂತೆ ವಿದ್ಯಾರ್ಥಿಗಳು ಗಳಿಸಿದ ಅಂಕ ಹಾಗೂ ಕುಟುಂಬದ ವಾರ್ಷಿಕ ಆದಾಯವನ್ನು ಪರಿಗಣಿಸಿ ವಿದ್ಯಾರ್ಥಿವೇತನ ನೀಡಲಾಗಿದೆ. ಕೋವಿಡ್ 19 ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿವೇತನ ವಿತರಣೆಗಾಗಿ ಯಾವುದೇ ಕಾರ್ಯಕ್ರಮ ಇಟ್ಟುಕೊಳ್ಳದೆ ವಿದ್ಯಾರ್ಥಿಗಳ ಹಾಗೂ ಅವರ ಪೋಷಕರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ದೋಹಾ ಕುಲಾಲ್ಸ್ ಪ್ರಮುಖರಾದ ಆನಂದ ಕುಂಬಾರ್ ತಿಳಿಸಿದ್ದಾರೆ.
ದೋಹಾ ಕುಲಾಲ್ಸ್ ವತಿಯಿಂದ 1.50 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ
Kulal news
1 Min Read