
ಕಾರ್ಕಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕಾರ್ಕಳ ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ನೇಹಾ ಅವರು ವಿಜ್ಞಾನ ವಿಭಾಗದಲ್ಲಿ(PCMB) 97.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಕಾಲೇಜಿಗೇ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಸಾಣೂರು ದರೆಕೆರೆ ದರ್ಖಾಸು ವನಿತ ನಿವಾಸ ಶೇಕರ ಮೂಲ್ಯ ಮತ್ತು ಆಶಾ ದಂಪತಿಯ ಸುಪುತ್ರಿ.

