
ಕಾರ್ಕಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿನಿ ಶರಣ್ಯ ಅವರು ವಾಣಿಜ್ಯ ವಿಭಾಗದಲ್ಲಿ 96.16% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇರ್ವತ್ತೂರು ಬಸ್ತಿಬೆಟ್ಟುಮನೆ ರವಿ ಮೂಲ್ಯ ಮತ್ತು ಉಷಾ ದಂಪತಿಯ ಸುಪುತ್ರಿ .

