ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್): ಏನೇ ಇದ್ದರೂ ಮನುಷ್ಯನಿಗೆ ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ. ಇತ್ತೀಚಿನ ದಿನಗಳಲ್ಲಿ ಚಿಕ್ಕ ಪ್ರಾಯದ ವ್ಯಕ್ತಿಗಳೂ ಮಾರಣಾಂತಿಕ ರೋಗಗಳಿಗೆ ತುತ್ತಾಗುತ್ತಿರುವುದು ಬಹಳ ಆತಂಕಕಾರಿ ಬೆಳವಣಿಗೆ. ಇಂತಹಾ ಸಂದರ್ಭದಲ್ಲಿ ಮನೆಯ ಆರ್ಥಿಕ ಪರಿಸ್ಥಿತಿ ಸರಿಯಿಲ್ಲದೇ ಇದ್ದರೆ ಬದುಕೇ ನರಕ ಸದೃಶ. ಹೀಗೆ ವಿವಿಧ ಅರೋಗ್ಯ ಸಮಸ್ಯೆಗಳಿಗೆ ತುತ್ತಾಗಿ ಚಿಕಿತ್ಸೆಗೆ ಹಣವಿಲ್ಲದೆ ಕಂಗೆಟ್ಟ ಮೂರು ಕುಟುಂಬಗಳು ಹಣ ಸಹಾಯದ ನಿರೀಕ್ಷೆಯಲ್ಲಿದ್ದು, ಹೃದಯವಂತ ದಾನಿಗಳು ಇವರ ಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ.




