ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್) : ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯ ೭ನೇ ತರಗತಿಯ ವಿದ್ಯಾರ್ಥಿ ಯಶ್ವಿತ್ ಕುಲಾಲ್ ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ನೀಡಲಾಗುವ ೨೦೨೩-೨೪ನೇ ಸಾಲಿನ ‘ಇನ್ಸ್ ಪೈರ್ ಅವಾರ್ಡ್’ ಪಡೆದಿದ್ದಾರೆ.
ಸುಮಾರು ಎರಡು ಲಕ್ಷ ವಿದ್ಯಾರ್ಥಿಗಳ ಪೈಕಿ ೨೪೫೭ ವಿಜೇತ ವಿದ್ಯಾರ್ಥಿಗಳ ಪಟ್ಟಿಯಲ್ಲಿ ವಿದ್ಯಾರ್ಥಿ ಯಶ್ಚಿತ್ ಕುಲಾಲ್ ಕೂಡ ಒಬ್ಬರಾಗಿದ್ದು ಇವರಿಗೆ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರು, ಸಂಚಾಲಕರು, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಮತ್ತು ಅಧ್ಯಾಪಕೇತರರು ಅಭಿನಂದನೆ ಸಲ್ಲಿಸಿರುತ್ತಾರೆ.

