ಬಂಟ್ವಾಳ(ಕುಲಾಲ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯ ಪ್ರಾಚ್ಯ ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಇತ್ತೀಚೆಗೆ ಕಲಬುರ್ಗಿ ಯಲ್ಲಿ ನಡೆದ ರಾಜ್ಯಮಟ್ಟದ ಪ್ರಾಚ್ಯ ಪ್ರಜ್ಞೆ ಭಾಷಣ ಸ್ಪರ್ಧೆಯಲ್ಲಿ ಸಿದ್ಧಕಟ್ಟೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಲಿಖಿತಾ ಆರ್ ಸಾಲ್ಯಾನ್ ರವರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಶಾಲೆ, ತಾಲೂಕು, ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ. ನಮ್ಮ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಒಟ್ಟು 105 ಸ್ಪರ್ಧಿಗಳು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವುದು ವಿಶೇಷ ಸಾಧನೆಯಾಗಿದೆ. ಶಾಲಾ ಸಮಾಜ ವಿಜ್ಞಾನ ಶಿಕ್ಷಕರು,ಭಾಷಣಕಾರರೂ ಆಗಿರುವ ಮಹೇಶ್ ಕುಮಾರ್ ವಿ ಕರ್ಕೇರ ರವರ ಮಾರ್ಗದರ್ಶನದಲ್ಲಿ ಲಿಖಿತಾ ರವರು ಈ ಸಾಧನೆ ಮಾಡಿರುತ್ತಾರೆ.
ಲಿಖಿತಾ ಆರ್ ಸಾಲ್ಯಾನ್ ರವರು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ಕೇವಲ 3ವರ್ಷಗಳಲ್ಲಿ 4ಬಾರಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, 2023ರಲ್ಲಿ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದು,2025ನೇ ಸಾಲಿನ ಪ್ರಾಚ್ಯ ಪ್ರಜ್ಞೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.