ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವೈಭವಿ ಮೂಲ್ಯ ಅವರು ವಾಣಿಜ್ಯ ವಿಭಾಗದಲ್ಲಿ 91.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ್ದಾರೆ. ಇವರು ಇರ್ವತ್ತೂರು ಕೆಂಪುಗುಡ್ಡೆ ನಿವಾಸಿ ಭೋಜ ಮೂಲ್ಯ ಮತ್ತು ಅವಿರಾ ದಂಪತಿಯ ಸುಪುತ್ರಿ.
