ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಸಾಣೂರು ಇಲ್ಲಿನ ವಿದ್ಯಾರ್ಥಿನಿ ಧನ್ಯಾ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 94.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾಂತಾವರ ಗ್ರಾಮದ ಬೇಲಾಡಿ ನಂದನ ನಿವಾಸಿ ಉದಯ ಕುಲಾಲ್ ಮತ್ತು ವಿನೋದ ಕುಲಾಲ್ ದಂಪತಿಯ ಸುಪುತ್ರಿ.

