ಬಂಟ್ವಾಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಮೊಡಂಕಾಪು ಕಾರ್ಮೆಲ್ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿನಿ ಋತಿಕಾ ಮೂಲ್ಯ ಅವರು ವಾಣಿಜ್ಯ ವಿಭಾಗದಲ್ಲಿ 95.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ್ದಾರೆ. ಇವರು ಬಂಟ್ವಾಳ ನಿವಾಸಿ ನಾಗೇಶ್ ಮೂಲ್ಯ ಮತ್ತು ವಾರಿಜಾ ದಂಪತಿಯ ಸುಪುತ್ರಿ.
