ಮೈಸೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : ಇಂದು 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಭಾರತ್ ಮಾತ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿರಾಜಪೇಟೆ ತಾಲೂಕಿನ ಮಾಕುಟ್ಟದಲ್ಲಿ ಅರಣ್ಯ ಇಲಾಖೆಯ ಡಿಆರ್ ಎಫ್ ಒ ಸೇವೆ ಸಲ್ಲಿಸುತ್ತಿರುವ ಎಂ.ಎ.ಆನಂದ್ ಮತ್ತು ಸುಜಾತಾ ದಂಪತಿಯ ಸುಪುತ್ರಿ ಎಂ.ಎ.ತೇಜಸ್ವಿನಿ ಕಾಮರ್ಸ್ ವಿಭಾಗದಲ್ಲಿ 600 ಅಂಕಗಳಿಗೆ 598 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ತೇಜಸ್ವಿನಿ ಕುಶಾಲನಗರದ ಹಳೆ ಮಾರ್ಕೆಟ್ ಬಳಿ ಇರುವ ಆದಿಶಂಕರಾಚಾರ್ಯ ಬಡಾವಣೆಯ ನಿವಾಸಿಯಾಗಿದ್ದು ಎಲ್ಲಾ ವಿಷಯಗಳಲ್ಲೂ ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದರೆ ಇಂಗ್ಲಿಷ್ ಭಾಷಾ ವಿಷಯದಲ್ಲಿ ನೂರು ಅಂಕಗಳಿಗೆ 98 ಅಂಕಗಳನ್ನು ಪಡೆದಿದ್ದಾರೆ. ಒಟ್ಟು 598 ಅಂಕಗಳನ್ನು ಗಳಿಸಿದ್ದಾರೆ. ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿಗೆ ಭಾರತ್ ಮಾತಾ ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.