ಬೆಳ್ತಂಗಡಿ (ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಾಣಿ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿನಿ ರಿತಿಷಾ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 98.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಹತ್ತನೇ ಸ್ಥಾನ ಪಡೆದಿದ್ದಾರೆ. ಇವರು ವೇಣೂರು ಗುಂಡೂರಿಯ ಸೇಸಪ್ಪ ಮತ್ತು ಸುಜಾತಾ ದಂಪತಿಯ ಸುಪುತ್ರಿ.

