ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜು ಉಡುಪಿ ಇದರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಕಾಂತಾವರ ಗ್ರಾಮದ ಬಾರಾಡಿಯ ಸೃಜನಾ ಕುಲಾಲ್ ಇವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸೃಜನಾ ಅವರು ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಇಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿನಿಯಾಗಿದ್ದಾರೆ. ಇವರು ಕಾಂತಾವರ ಗ್ರಾಮದ ಬಾರಾಡಿಯ ಜಗದೀಶ್ ಕುಲಾಲ್ ಹಾಗೂ ಜ್ಯೋತಿ ಕುಲಾಲ್ ದಂಪತಿಗಳ ಪುತ್ರಿ. ಇವರಿಗೆ ಕರಾಟೆ ಶಿಕ್ಷಕರಾದ ಸತೀಶ್ ಬೆಳ್ಮಣ್ ಹಾಗೂ ಮೃಣಾಲಿ ಶೆಟ್ಟಿ ಇವರು ತರಬೇತಿ ನೀಡಿರುತ್ತಾರೆ.
ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಸೃಜನಾ ಕುಲಾಲ್
Students corner
1 Min Read