ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : ವಿವಿಧ ಕ್ಷೇತ್ರದ 68 ಸಾಧಕರು ಮತ್ತು 26 ಸಂಘ-ಸಂಸ್ಥೆಗಳನ್ನು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಇದರಲ್ಲಿ ಕುಲಾಲ ಸಮಾಜದ ಸಂಘಟಕ, ಉದ್ಯಮಿ ಅನಿಲ್ ದಾಸ್ ಹಾಗೂ ದ.ಕ.ಜಿಲ್ಲಾ ಕುಲಾಲರ ಮಾತೃ ಸಂಘ ಕೂಡ ಸೇರಿದೆ.
ಮಯೂರ್ ಉಳ್ಳಾಲ್ ಅಧ್ಯಕ್ಷರಾಗಿರುವ ಶತಮಾನಗಳ ಇತಿಹಾಸ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ವಿವಿಧ ಸೇವೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ( ರಿ) ಜಿಲ್ಲಾ ಸಮಿತಿ ದ.ಕ. ಇದರ ಜಿಲ್ಲಾ ಅಧ್ಯಕ್ಷರಾದ ಅನಿಲ್ ದಾಸ್ , ತಮ್ಮ ದಾಸ್ ಚಾರಿಟೇಬಲ್ ಟ್ರಸ್ಟ್ ಮೂಲಕ ಹಾಗೂ ಕನ್ನಡ ಸಂಘಟನೆಯ ಪದಾಧಿಕಾರಿಯಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದಾರೆ.

