ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : ಕರ್ನಾಟಕ ರಾಜ್ಯೋತ್ಸವದ ಶುಭಾವಸರದಲ್ಲಿ ಬಹುಮುಖ ಪ್ರತಿಭೆ ಸಮೃದ್ಧಿ ಎಂ. ಕೆ ಅವರಿಗೆ ಕಲ್ಕೂರ ಪ್ರತಿಷ್ಠಾನ ಮಂಗಳೂರು ವತಿಯಿಂದ ೨೦೨೫ ರಾಜ್ಯೋತ್ಸವ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಮಂಗಳೂರು ಡಾನ್ ಬಾಸ್ಕೋ ಹಾಲ್ ನಲ್ಲಿನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಅಖಿಲ ಭಾರತ ತುಳು ಒಕ್ಕೂಟದ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಶಾರದ ವಿದ್ಯಾ ಸಂಸ್ಥೆಗಳ ಮುಖ್ಯಸ್ಥ ಎಂ.ಬಿ.ಪುರಾಣಿಕ್ , ಕ.ಸಾ.ಪ.ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಸುರೇಶ್ ಶೆಟ್ಟಿ ಯಯ್ಯಾಡಿ, ಪ್ರದೀಪ್ ಕುಮಾರ್ ಕಲ್ಕೂರ ಮೊದಲಾದವರು ಉಪಸ್ಥಿತರಿದ್ದರು.

ಇವರು ತೋಕೂರು ರಾಮಣ್ಣ ಶೆಟ್ಟಿ ಸಿ ಬಿ ಸ್ ಇ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಮಾರ್ಷಲ್ ಆರ್ಟ್ಸ್ ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಸುರತ್ಕಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ ಇದರ ವಿದ್ಯಾರ್ಥಿನಿಯಾಗಿರುವ ಸಮೃದ್ಧಿಗೆ ನಿತಿನ್ ಎನ್ ಸುವರ್ಣ ಹಾಗೂ ಸಂಪತ್ ಕುಮಾರ್ ತರಬೇತಿ ನೀಡುತ್ತಿದ್ದಾರೆ. ಪಕ್ಷಿಕೆರೆಯ ಮನೋಜ್ ಕುಮಾರ್ ಮತ್ತು ಗೀತಾ ಮನೋಜ್ ದಂಪತಿಯ ಸುಪುತ್ರಿ.
ಮಿನಿ ಕರ್ನಾಟಕ ಕ್ರೀಡಾಕೂಟದಲ್ಲಿ ಚಿನ್ನದ ಪದಕ : ರ್ನಾಟಕ ಒಲಿಂಪಿಕ್ಸ್ ಸಂಸ್ಥೆ ವತಿಯಿಂದ 4ನೇ ಮಿನಿ ಕರ್ನಾಟಕ ಕ್ರೀಡಾಕೂಟ – 2025 ಇದರಲ್ಲಿ ಭಾಗವಹಿಸಿದ ಸಮೃದ್ಧಿ ಎಂ. ಕೆ ಅವರು ಚಿನ್ನದ ಪದಕ ಗೆದ್ದಿದ್ದಾರೆ. ಇವರು 48 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದರು.

