ವೇಣೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗ ಇದರ ಸಹಯೋಗದಲ್ಲಿ ಗದಗದಲ್ಲಿ ಜರುಗಿದ ರಾಜ್ಯಮಟ್ಟದ ಪ್ರಾಚ್ಯ ಪ್ರಜ್ಞೆ ಭಾಷಣ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಇಲ್ಲಿಯ ವಿದ್ಯಾರ್ಥಿನಿ ಧನುಶ್ರೀ ಎಸ್. ಕುಲಾಲ್ ರಾಜ್ಯಮಟ್ಟದಲ್ಲಿ ನಾಲ್ಕು ವಿಭಾಗಗಳಿಂದ ಸ್ಪರ್ಧಿಸಿದ 106 ವಿದ್ಯಾರ್ಥಿಗಳಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾಳೆ. ವಿಜೇತ ವಿದ್ಯಾರ್ಥಿನಿಯನ್ನು ಶಾಲಾ ಉಪಪ್ರಾಂಶುಪಾಲರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಭಿನಂದಿಸಿದ್ದಾರೆ. 2025ನೇ ಸಾಲಿನ ಪ್ರಾಚ್ಯ ಪ್ರಜ್ಞೆ ಭಾಷಣ ಸ್ಪರ್ಧೆಯಲ್ಲಿ ಸಿದ್ಧಕಟ್ಟೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ, ಕುಲಾಲ ಸಮಾಜದ ಲಿಖಿತಾ ಆರ್ ಸಾಲ್ಯಾನ್ ಪ್ರಥಮ ಸ್ಥಾನ ಪಡೆದಿದ್ದರು.

