ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ದ.ಕ. ಜಿಲ್ಲಾ ಸಮಿತಿ ಹಾಗೂ ಮಂಗಳೂರು ದಾಸ್ ಚಾರಿಟೆಬಲ್ ಸೇವಾ ಟ್ರಸ್ಟ್ ಸಹಯೋಗದಲ್ಲಿ ಕುಂಭ ಕಲಾವಳಿ, ಕುಲಾಲ ಕಲಾ ಸೇವಾಂಜಲಿ ಬೃಹತ್ ಅದ್ಧೂರಿ ಕಾರ್ಯಕ್ರಮ ಜ. 4 ರಂದು ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದ್ದು, ಇದಕ್ಕೀಗ ಕ್ಷಣಗಣನೆ ಆರಂಭವಾಗಿದೆ.ಒಂದು ದಿನಪೂರ್ತಿ ನಡೆಯಲಿರುವ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಸ್ಪರ್ಧೆ, ಸಾಧಕರಿಗೆ ಸನ್ಮಾನ ಹಾಗೂ ಅಶಕ್ತರಿಗೆ ನೆರವು ಹಾಗೂ ನಾನಾ ಸಾಮಾಜಿಕ , ಸಾಂಸ್ಕೃತಿಕ ಸೇವಾ ಚಟುವಟಿಕೆಗಳು ನಡೆಯಲಿದೆ.

ಬೆಳಗ್ಗೆ 8.30ಕ್ಕೆ ವೈಷ್ಣವಿ ಕ್ಷೇತ್ರ ಮುಳಿಯದ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿ ಉಪಸ್ಥಿತಿಯಲ್ಲಿ ನಡುಬೊಟ್ಟು ಶ್ರೀ ಉದ್ಭವ ರೌದ್ರನಾಥೇಶ್ವರ ದೈವಸ್ಥಾನದ ಧರ್ಮದರ್ಶಿ ಡಾ. ರವಿ ಎನ್. ದೀಪ ಪ್ರಜ್ವಲನೆ ಮಾಡಲಿದ್ದಾರೆ. ಬೆಳಗ್ಗೆ 9ಕ್ಕೆ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಲಿದ್ದು, ಬೆಳಗ್ಗೆ 9.30ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಶ್ರೀಧಾಮ ಮಾಣಿಲದ ಯೋಗಿ ಕೌಸ್ತುಭ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅನಿಲ್ದಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಸಭಾ ಕಾರ್ಯಕ್ರಮ, ಸಂಜೆ 5.30ಕ್ಕೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ನಾನಾ ಗಣ್ಯರು ಭಾಗವಹಿಸಲಿದ್ದಾರೆ. ದಾಸ್ ಚಾರಿಟೆಬಲ್ ಸೇವಾ ಟ್ರಸ್ಟ್ ಮಂಗಳೂ ರಿನ ಸಹಯೋಗದಲ್ಲಿ ಸೇವಾಂಜಲಿ ಹೆಸರಲ್ಲಿ ಫಲಾನುಭವಿಗಳಿಗೆ ಸಹಾಯ ಹಸ್ತ, ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಪ್ರೋತ್ಸಾಹಧನ, ವೈದ್ಯಕೀಯ ನೆರವು, ಆಶಕ್ತರಿಗೆ ಆರ್ಥಿಕ ಸಹಾಯ, ಸಮುದಾಯದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಕುಲಾಲ ಸಮುದಾಯದ ಸಂಘ ಸಂಸ್ಥೆ ಯುವ ವೇದಿಕೆಗಳ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವು 2 ಲಕ್ಷಕ್ಕೂ ಹೆಚ್ಚಿನ ನಗದು ಬಹುಮಾನ ದೊಂದಿಗೆ ನಡೆಯಲಿದೆ.

